ಕುವೆಂಪು ವಿವಿ ನೂತನ ಕುಲಸಚಿವರಾಗಿ ವಿಜಯ್‌ಕುಮಾರ್ ಅಧಿಕಾರ ಸ್ವೀಕಾರ

| Published : Feb 06 2024, 01:30 AM IST

ಕುವೆಂಪು ವಿವಿ ನೂತನ ಕುಲಸಚಿವರಾಗಿ ವಿಜಯ್‌ಕುಮಾರ್ ಅಧಿಕಾರ ಸ್ವೀಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ಎಚ್‌.ಬಿ. ವಿಜಯ್‌ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಕುವೆಂಪು ವಿ.ವಿ.ಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ.2ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರ ಬೆಳಗ್ಗೆ ಕೆಎಎಸ್ ಅಧಿಕಾರಿ ವಿಜಯ್‌ಕುಮಾರ್ ನೂತನ ಕುಲಸಚಿವರಾಗಿ ಕರ್ತವ್ಯ ಆರಂಭಿಸಿದ್ದಾರೆ. ಇವರು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, 2014ರ ಬ್ಯಾಚ್‌ನಲ್ಲಿ ಕೆಎಎಸ್‌ಗೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ಎಚ್‌.ಬಿ. ವಿಜಯ್‌ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು.

ಕುವೆಂಪು ವಿ.ವಿ.ಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ.2ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರ ಬೆಳಗ್ಗೆ ಕೆಎಎಸ್ ಅಧಿಕಾರಿ ವಿಜಯ್‌ಕುಮಾರ್ ನೂತನ ಕುಲಸಚಿವರಾಗಿ ಕರ್ತವ್ಯ ಆರಂಭಿಸಿದ್ದಾರೆ. ಇವರು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, 2014ರ ಬ್ಯಾಚ್‌ನಲ್ಲಿ ಕೆಎಎಸ್‌ಗೆ ಆಯ್ಕೆಯಾಗಿದ್ದಾರೆ.

ಮೂಲತಃ ಚನ್ನಗಿರಿ ತಾಲೂಕಿನ ವಿಜಯ್‌ಕುಮಾರ್ 2018ರ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದಾರೆ. ಕುವೆಂಪು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಆಗಿರುವ ಅವರು ಪ್ರಸ್ತುತ ಕುವೆಂಪು ವಿ.ವಿ.ಗೆ ಆಡಳಿತ ಕುಲಸಚಿವರಾಗಿ ಸೇವೆ ಸಲ್ಲಿಸಲು ನಿಯುಕ್ತಿಗೊಂಡು, ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಈ ಸಂದರ್ಭ ವಿ.ವಿ.ಯ ಕುಲಪತಿ ಪ್ರೊ. ಎಸ್.ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ.ಎಸ್. ಗೋಪಿನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಎಂ.ಆರ್‌. ಸತ್ಯಪ್ರಕಾಶ್, ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.

- - - -5ಎಸ್ಎಂಜಿಕೆಪಿ03:

ಶಂಕರಘಟ್ಟದ ಕುವೆಂಪು ವಿ.ವಿ.ಯಲ್ಲಿ ಎಚ್‌.ಬಿ.ವಿಜಯ್‌ಕುಮಾರ್ ಸೋಮವಾರ ಆಡಳಿತ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದರು.