ಸಾರಾಂಶ
ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು ಕೊಡಗು ಮೂಲದ ವಿಜಯಲಕ್ಷ್ಮಿ ಸಿಂಗ್, ಬಬಿನಾ ಅವರಿಗೆ ದೊರಕಿದೆ. 
ಕನ್ನಡಪ್ರಭ ವಾರ್ತೆ ಮಡಿಕೇರಿ
ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕೊಡಗು ಮೂಲದ ವಿಜಯಲಕ್ಷ್ಮಿ ಸಿಂಗ್, ಬಬಿನಾ ಅವರಿಗೆ ದೊರಕಿದೆ.ವಿಜಯಲಕ್ಷ್ಮಿ ಸಿಂಗ್ ಅವರು 48 ವರ್ಷಕ್ಕೂ ಹೆಚ್ಚು ಕಾಲ ಸುಮಾರು 60 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 5 ಚಿತ್ರಗಳನ್ನು ನಿರ್ದೇಶಿಸಿರುವ ಇವರು ಒಟ್ಟು 25 ಚಿತ್ರಗಳನ್ನು ನಿರ್ಮಿಸಿದ್ದಾರೆ. ಇವರು ಸೋಮವಾರಪೇಟೆ ಸಮೀಪದ ಕಾರೆಕೊಪ್ಪದ ನಟ ಜೈಜಗದೀಶ್ ಅವರ ಪತ್ನಿ.
ಮುಂಗಾರಿನ ಮಿಂಚು ಚಲನಚಿತ್ರಕ್ಕೆ ರಾಷ್ಟ್ರಪ್ರಶಸ್ತಿ, ಕುರಿಗಳು ಸಾರ್ ಕುರಿಗಳು ಚಲನಚಿತ್ರಕ್ಕೆ ರಾಜ್ಯಪ್ರಶಸ್ತಿ, ಕೋತಿಗಳು ಸಾರ್ ಕೋತಿಗಳು ಚಲನಚಿತ್ರಕ್ಕೆ ರಾಜ್ಯಪ್ರಶಸ್ತಿ ಹಾಗೂ ಫಿಲಂ ಫೇರ್ ಪ್ರಶಸ್ತಿ, ಭೂಮಿ ತಾಯಿ ಚೊಚ್ಚಲ ಮಗ ಚಿತ್ರಕ್ಕೆ ಪರಿಸರ ರಾಜ್ಯ ಪ್ರಶಸ್ತಿ, ಹೂ ಹಣ್ಣು ಚಿತ್ರಕ್ಕೆ ರಾಜ್ಯ ಪ್ರಶಸ್ತಿಗಳು, ಕಾಂಚನಗಂಗಾ ಚಿತ್ರಕ್ಕೆ ರಾಜ್ಯಪ್ರಶಸ್ತಿ ದೊರಕಿದೆ.ಡಾ.ಎನ್.ಎಂ.ಬಬಿನಾ
ವಿರಾಜಪೇಟೆ ತಾಲೂಕಿನ ಅಮ್ಮತ್ತಿಯ ಡಾ.ಎನ್.ಎಂ.ಬಬಿನಾ ಅವರು ಈಗ ಬೆಂಗಳೂರಿನ 550 ಹಾಸಿಗೆಗಳ ಜಿಂದಾಲ್ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ತಮ್ಮ ಪ್ರಾಥಮಿಕ ಶಿಕ್ಷಣವನ್ನು ಅಮ್ಮತ್ತಿಯಲ್ಲಿ, ಪ್ರೌಢಶಿಕ್ಷಣವನ್ನು ಮೈಸೂರಿನ ಕ್ರೈಸ್ಟ್ ದಿ ಕಿಂಗ್ ಕಾನ್ವೆಂಟ್‌ನಲ್ಲಿ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕೋವಿಡ್–19 ಕಾಲಘಟ್ಟದಲ್ಲಿ ಇವರು ರೋಗನಿರೋಧಕ ಶಕ್ತಿ ವೃದ್ಧಿ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ನಿರ್ವಹಣೆಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಪ್ರಾಯೋಗಿಕ ಮಾರ್ಗಗಳನ್ನು ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))