ಮರಿಯಮ್ಮನಹಳ್ಳಿ ಪಪಂ ಅಧ್ಯಕ್ಷರಾಗಿ ಆದಿಮನಿ ಹುಸೇನ್ ಬಾಷಾ ಆಯ್ಕೆಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆದಿಮನಿ ಹುಸೇನ್ ಬಾಷಾ, ಉಪಾಧ್ಯಕ್ಷರಾಗಿ ಲಕ್ಷ್ಮೀ ರೋಗಾಣಿ ಮಂಜುನಾಥ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಪಪಂ ಕಚೇರಿಯ ಮುಂದಿನ ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.