ಅಧಿಕಾರಿಗಳ ಮೈಚಳಿ ಬಿಡಿಸಿದ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ನೇತೃತ್ವದ ತಂಡ ಶುಕ್ರವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನಗರಸಭೆ, ತಹಸೀಲ್ದಾರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಹುಡಾ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿ, ಕಾರ್ಮಿಕ ಇಲಾಖೆ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ, ಆರ್ಟಿಒ ಕಚೇರಿ, ಬಾಲಕರ ಮೆಟ್ರಿಕ್ ಪೂರ್ವ ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲಿಸಿತು.