ಮಕ್ಕಳ ಹಕ್ಕುಗಳ ಸಂರಕ್ಷಿಸಿ ಗೌರವಿಸೋಣಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಹೊಸಪೇಟೆಯ ಜಿಲ್ಲಾ ಒಳ ಕ್ರೀಡಾಂಗಣದ ಸಭಾಭವನದಲ್ಲಿ ಗುರುವಾರ ರಾಜ್ಯಮಟ್ಟದ ಶೌರ್ಯ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಮಕ್ಕಳನ್ನು ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕವಾಗಿ ಸದೃಢಗೊಳಿಸಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಿ ಗೌರವಿಸಬೇಕಾಗಿದೆ ಎಂದರು. ನಿವೃತ್ತ ಚಿತ್ರಕಲಾ ಉಪನ್ಯಾಸಕ ಆರ್.ಎಲ್. ಜಾಧವ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ವಲ್ಲಭಾಪುರ ಶಾಲೆಯ ಬಹುಮುಖ ಪ್ರತಿಭೆ, ಕುಸ್ತಿಪಟು ಕೆ.ಸಿ. ಸುಧಾಬಾಯಿ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.