ಕಮಲ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆಕನ್ನಡ ಭಾಷೆ ಕುರಿತು ಹಗುರ ಹೇಳಿಕೆ ನೀಡಿದ ತಮಿಳು ಚಿತ್ರ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ಹೊಸಪೇಟೆಯ ಪುನೀತ್ ರಾಜ್‌ಕುಮಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.