ಮಹಿಳೆಯರಿಗೆ ನ್ಯಾಯ ಸಿಗಲೆಂದು ಆಗ್ರಹಿಸಿ ತೆಂಗಿನಕಾಯಿ ಒಡೆದು ಪ್ರತಿಭಟನೆಧರ್ಮಸ್ಥಳ ಉಳಿಯಲಿ, ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಮತ್ತು ಇತರ ಮಹಿಳೆಯರಿಗೆ ನ್ಯಾಯ ಸಿಗಲಿ ಎಂದು ಆಗ್ರಹಿಸಿ ಪಟ್ಟಣದ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಇಲ್ಲಿನ ಬಸ್ ನಿಲ್ದಾಣ ವೃತ್ತದಿಂದ ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನದ ತನಕ ನೂರಾರು ತೆಂಗಿನಕಾಯಿ ಒಡೆದು ಪ್ರತಿಭಟನೆ ನಡೆಸಿದರು.