ಒಂದೇ ದಿನ ಹಂಪಿಗೆ 25 ಸಾವಿರಕ್ಕೂ ಅಧಿಕ ಪ್ರವಾಸಿಗರ ಆಗಮನವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ವೀಕೆಂಡ್ ಹಿನ್ನೆಲೆ ಭಾನುವಾರ ಒಂದೇ ದಿನ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಆಗಮಿಸಿದ್ದರು. ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆ ಪ್ರವಾಸೋದ್ಯಮ ನೆಚ್ಚಿಕೊಂಡಿರುವವರಿಗೂ ಅನುಕೂಲವಾಗಿದೆ.