ವ್ಯಕ್ತಿ ಬರ್ಬರ ಹತ್ಯೆ; ಕೊಲೆ ಆರೋಪಿಗೆ ಗುಂಡೇಟುನಗರದ ಜಂಬುನಾಥ ರಸ್ತೆಯ ಅಂಬೇಡ್ಕರ್ ನಗರ ನಾಲ್ಕನೇ ಕ್ರಾಸ್ನಲ್ಲಿ ಬುಧವಾರ ರಾತ್ರಿ ಹಳೆ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದ್ದು, ಪಂಚನಾಮೆ ವೇಳೆ ಕೊಲೆ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಗುಂಡು ಹಾರಿಸಲಾಗಿದೆ.