ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಸೀಮಂತ ಶಾಸ್ತ್ರ ನಮ್ಮ ಭಾರತೀಯ ಸಂಸ್ಕೃತಿಯ ಒಂದು ಭಾಗ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾವತಿ ಅಮರನಾಥ್ ಹೇಳಿದರು.ವಿಜಯನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಸ್ತ್ರೀಶಕ್ತಿ ಭವನದಲ್ಲಿ ಕೆಯುಕೆ ಫೌಂಡೇಷನ್ ವತಿಯಿಂದ ಬುಧವಾರ ಆಯೋಜಿಸಿದ್ದ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬೆಳೆಯುವ ಮಕ್ಕಳು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಆಸ್ತಿಯಾಗಬೇಕು. ಒಂದು ಮಗುವಿನ ಬೆಳವಣಿಗೆ ಎಂದರೆ ಅದು ಸಮಾಜದ ಬೆಳವಣಿಗೆ, ದೇಶದ ಬೆಳವಣಿಗೆ ಹಾಗೂ ಮಗುವನ್ನು ಸಮಾಜದ ಆಸ್ತಿಯನ್ನಾಗಿ ಬೆಳೆಸಲು ಈ ಸಂಸ್ಕಾರಗಳು ಅತ್ಯಂತ ಅಗತ್ಯ ಎಂದರು.ಗರ್ಭಾವಸ್ಥೆ ಅವಧಿಯಲ್ಲಿ ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಎಚ್ಚರಿಕೆ, ಸ್ತನ್ಯಪಾನದ ಮಹತ್ವ ಹಾಗೂ ಮಕ್ಕಳ ಪೋಷಣೆ ಕುರಿತು ಜಾಗೃತಿ ಮೂಡಿಸಲಾಯಿತು. ಅಲ್ಲದೇ, ಪೋಷ್ಟಿಕಾಂಶದ ಕೊರತೆ ಮಕ್ಕಳಲ್ಲಿ ಕಾಣಿಸಿಕೊಳ್ಳದಂತೆ ಯಾವ ಆಹಾರ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು.ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಿ. ಬಸವರಾಜು, ಸೌಮ್ಯಾ ಅನಿಲ್ ಚಿಕ್ಕಮಾದು, ಮೈಸೂರು ಡಯಾಗ್ನೋಸ್ಟಿಕ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ. ಮುತ್ತಣ್ಣ, ಶ್ರೀ ದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ರವಿ ಮಂಚೇಗೌಡನ ಕೊಪ್ಪಲು, ಕೆ.ಯು.ಕೆ. ಫೌಂಡೇಷನ್ ಅಧ್ಯಕ್ಷ ಖುಷಿ ಮಂಜುನಾಥ್ ಮೊದಲಾದವರು ಇದ್ದರು.