ಶ್ವಾನ ಆರೈಕೆ ಕೇಂದ್ರ ನಿರ್ಮಾಣಕ್ಕೆ ಸುಧಾಮೂರ್ತಿ ಭೂಮಿಪೂಜೆಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ 2025-26ನೇ ಸಾಲಿನ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ವಿಜಯಪುರ ತಾಲೂಕಿನ ಬುರಣಾಪೂರ ಗ್ರಾಮದಲ್ಲಿ ಬುಧವಾರ ಸಮಗ್ರ ಶ್ವಾನ ಆರೈಕೆ ಕೇಂದ್ರ ನಿರ್ಮಾಣ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು.