• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ.26ರಿಂದ ಒಂದು ವಾರ ಉಗ್ರ ಹೋರಾಟ
ಕನ್ನಡಪ್ರಭ ವಾರ್ತೆ ಸಿಂದಗಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಮೂಲಕ ಸಭಾಧ್ಯಕ್ಷ ಯು.ಟಿ.ಖಾದರ ಅವರು ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಇದು ಸಭಾಧ್ಯಕ್ಷರ ನಿರ್ಧಾರವೋ ಅಥವಾ ಸರ್ಕಾರದ ನಿರ್ಧಾರವೋ ಎಂಬುದನ್ನು ಹೇಳಬೇಕು. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಒತ್ತಾಯಿಸಿದರು.
ನಿರ್ದಿಷ್ಟ ಗುರಿಯೊಂದಿಗೆ ಸ್ವಾವಲಂಬಿಯಾಗಿ
ಕನ್ನಡಪ್ರಭ ವಾರ್ತೆ ಇಂಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವುದರ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ ಹಾಗೂ ಸ್ವಯಂ ಶಿಸ್ತಿನ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ರೂಢಿಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.
ಭವಿಷ್ಯಕ್ಕೆ ಜೀವಜಲ ನಶಿಸದಂತೆ ಎಚ್ಚರವಹಿಸಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಭೂಮಿಯ ಮೇಲಿನ ನೈಸರ್ಗಿಕ ಸಂಪನ್ಮೂಲಗಳಲ್ಲಿ ನೀರು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದುಕೊಂಡಿದೆ. ಈ ಸಂಪನ್ಮೂಲವು ನಶಿಸದಂತೆ ಹಾಗೂ ಮಲಿನಗೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕೆಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವಿ.ಸೂರ್ಯವಂಶಿ ಹೇಳಿದರು.
ಹವಾಮಾನದ ಅಡ್ಡ ಪರಿಣಾಮ ಎದುರಿಸಲು ಸಜ್ಜಾಗಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರೈತರಿಗೆ ಕೃಷಿ ಕಾರ್ಯಾಚರಣೆಗಳನ್ನು ಕೈಗೊಂಡು ಸುಸ್ಥಿರ ಬೆಳೆ ಉತ್ಪಾದನೆ ಪಡೆಯಲು ಅಗತ್ಯವಿರುವ ಹವಾಮಾನ ಮಾಹಿತಿ ಮತ್ತು ಸಲಹೆಗಳನ್ನು ನೀಡಲು ಅಭಿವೃದ್ಧಿಪಡಿಸಲಾದ ಮಾದರಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಹವಾಮಾನ ಬದಲಾವಣೆಯ ಅಡ್ಡ ಪರಿಣಾಮಗಳನ್ನು ಎದುರಿಸಲು ರೈತರು ಸಜ್ಜಾಗಬೇಕೆಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಪ್ರಕಾಶ ಚವ್ಹಾಣ ಸಲಹೆ ನೀಡಿದರು.
ತಿಕೋಟಾ ಪ್ರಥಮ ಸಾಹಿತ್ಯ ಸಮ್ಮೇಳನ ಇಂದು
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಹಾಗೂ ತಾಲೂಕು ಕಸಾಪ, ಪದಾಧಿಕಾರಿಗಳು ಗ್ರಾಮದ ಹಿರಿಯರು ವಿರಕ್ತಮಠದಲ್ಲಿ ತಿಕೋಟಾ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸಮ್ಮೇಳನದ ಆಹ್ವಾನ ನೀಡಿ ಗೌರವಿಸಿದರು.
ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ ನೀರಸ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಎಂಇಎಸ್ ಪುಂಡಾಟಿಕೆ ಖಂಡಿಸಿ ವಾಟಾಳ ನಾಗರಾಜ್‌ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಬೆಂಬಲಿಸಿ ವಿಜಯಪುರ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಿಳೆಯರಿಂದ ಕೃಷಿ ಅಭಿವೃದ್ಧಿ ಸಾಧ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆ ಸೃಷ್ಟಿಯ ಕಣ್ಣು, ವಿವಿಧ ಕೃಷಿ ಚಟುವಟಿಕೆಗಳನ್ನು ಮಹಿಳೆಯರೇ ಹಮ್ಮಿಕೊಳ್ಳುವುದರಿಂದ ಅವರಿಂದಲೇ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಆರ್ಟ ಆಫ್ ಲಿವಿಂಗ್ ನ ಡಾ.ಬಿ.ಎಂ.ಪಾಟೀಲ ಗುರೂಜಿ ಹೇಳಿದರು.
ಭಯಪಡದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿ.ಬಿ.ದರಬಾರ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು.
ನೀರಾವರಿ ಯೋಜನೆಗಳ ಬಗ್ಗೆ ಯಶವಂತರಾಯ ಧ್ವನಿ
ಕನ್ನಡಪ್ರಭ ವಾರ್ತೆ ಇಂಡಿ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಕಾಲುವೆಯ 97 ಕಿ.ಮೀವರೆಗೆ ಮಾತ್ರ ನೀರು ಹರಿಯುತ್ತಿದೆ. ಮುಂದಿನ ಭಾಗಕ್ಕೆ ನೀರು ತಲುಪದಿರುವುದರಿಂದ ಜನ, ಜಾನುವಾರುಗಳಿಗೆ ಹಾಗೂ ಜನರು ಕುಡಿಯುವ ನೀರಿಗಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. 203 ಕಿ.ಮೀವರೆಗೆ ಕಾಲುವೆಯಲ್ಲಿ ನೀರು ಹರಿಸದಿರಲು ಕಾರಣ ಕುರಿತು ಶಾಸಕ ಯಶವಂತರಾಯಗೌಡ ಪಾಟೀಲ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದರು.
ಸಮಾಜದ ಬೆಂಬಲದಿಂದ ಮಹಿಳೆಗೆ ಯಶಸ್ಸು
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾನ ಅವಕಾಶಗಳು ಹಾಗೂ ಸಮಾಜದ ಬೆಂಬಲ ದೊರೆತರೆ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸನ್ನು ಸಾಧಿಸಬಹುದು. ಅಲ್ಲದೇ, ಭಾರತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved