ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆಈ ಬಾರಿ ನ.1 ರಂದು 87ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭಮ, ಸಡಗರದೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ತಾಯಿ ಭುವನೇಶ್ವರಿಗೆ ಗೌರವಿಸುವಂತಾಗಲು ತಾಲೂಕಾಡಳಿತದ ನೇತೃತ್ವದಲ್ಲಿ ಶುಕ್ರವಾರ ಹುಡ್ಕೋ ಬಡಾವಣೆಯಲ್ಲಿರುವ ಮಿನಿ ವಿಧಾನಸೌಧ ಸಭಾಭವನದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರ, ತಾಲೂಕು ಕಸಾಪ, ತಾಲೂಕುಮಟ್ಟ ಅಧಿಕಾರಿಗಳ, ಕನ್ನಡಪರ ಸಂಘಟನೆಗಳ ಸಮ್ಮುಖದಲ್ಲಿ ಸಭೆಯಲ್ಲಿ ನಿರ್ಧರಿಸಲಾಯಿತು.