ಆರೋಗ್ಯಕ್ಕೆ ಶುದ್ದ ಕುಡಿಯುವ ನೀರು ಅತಿಮುಖ್ಯ: ಡಾ.ಪ್ರಭುಗೌಡಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಆರೋಗ್ಯವಂತನಾಗಿರಲು ಶುದ್ಧ ಕುಡಿಯುವ ನೀರು ಮನುಷ್ಯನಿಗೆ ಅತಿ ಅವಶ್ಯಕ. ಚಿಕ್ಕಂದಿನಿಂದಲೇ ಮಕ್ಕಳು ಒಳ್ಳೆಯ ಆರೋಗ್ಯ ಕಾಪಾಡಿಕೊಂಡು ಬಂದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲಿದ್ದಾರೆ ಎಂದು ಎಐಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿರುವ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.