ಈಡೇರಿದ ಬಸವನಾಡಿನ ಬಹುದಿನಗಳ ಕನಸುರಾಜ್ಯದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜನ್ಮ ಸ್ಥಳದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಬಜೆಟ್‌ನಲ್ಲಿ ಪ್ರತ್ಯೇಕ ಪ್ರಾಧಿಕಾರ ರಚನೆಯ ಘೋಷಣೆ ಮಾಡಿದ್ದರು. ಇದೀಗ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಆ.೧೬ ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧೇಯಕ ಮಂಡಿಸಿದರು. ಇದರಿಂದ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕೆಂಬ ಬಸವಭಕ್ತರ ಬಹುದಿನಗಳ ಬೇಡಿಕೆ ಇದೀಗ ಈಡೇರಿದ್ದು, ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲರ ಇಚ್ಛಾಸಕ್ತಿ ಕೂಡ ಎದ್ದು ಕಾಣುತ್ತಿದೆ.