ಭಂಟನೂರ ಆಸ್ಪತ್ರೆಯಲ್ಲಿ ಸಮಸ್ಯೆಗಳು ಎಂಟನೂರು!ಕನ್ನಡಪ್ರಭ ವಾರ್ತೆ ತಾಳಿಕೋಟೆ ಬಡವರ ಆರೋಗ್ಯ ಕಾಳಜಿ ಮಾಡಬೇಕಾದ ಆರೋಗ್ಯ ಕೇಂದ್ರವೇ ಇದೀಗ ಅನಾರೋಗ್ಯಕ್ಕೆ ಒಳಗಾಗಿದ್ದು, ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನಲ್ಲಿ ಮಾದರಿಯ ಆಸ್ಪತ್ರೆಯಾಗಿ ಈ ಹಿಂದೆ ಕಂಗೊಳಿಸುತ್ತಿದ್ದ ಭಂಟನೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವೇ ಅನಾರೋಗ್ಯಕ್ಕೆ ಒಳಗಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿಯರಿಲ್ಲದೇ ಬಳಲುತ್ತಿದೆ.