ಜಿಲ್ಲಾದ್ಯಂತ ಸಂಭ್ರಮದ ವಿಜಯದಶಮಿ ಆಚರಣೆಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿಯಲ್ಲಿ ಒಂಭತ್ತು ದಿನಗಳ ಕಾಲ ನಿರಂತರವಾಗಿ ನಾಡದೇವಿಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ್ದ ಮಹಿಳೆಯರೆಲ್ಲ ಅದ್ಧೂರಿಯಿಂದ ವಿಜಯದಶಮಿ ಆಚರಿಸಿದರು. ಶನಿವಾರ ಜಿಲ್ಲೆಯ ಜನರು ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಿದರು. ಹಬ್ಬದ ಹಿನ್ನಲೆಯಲ್ಲಿ ನಗರದ ಮಾರುಕಟ್ಟೆಯಲ್ಲಿ ಹಣ್ಣು, ಹೂ, ಹಾರ, ತೆಂಗಿನಕಾಯಿ, ಕುಂಬಳಕಾಯಿ, ಬನ್ನಿ, ಬಾಳೆಗಿಡಗಳು ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದರು.