ಕೆಲಸ ಮಾಡದಿದ್ರೆ ನಾವೇ ಕ್ರಮಕೈಗೊಳ್ಳಬೇಕಾಗುತ್ತೆಕನ್ನಡಪ್ರಭ ವಾರ್ತೆ ಸಿಂದಗಿ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ತಿನ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಹಲವಾರು ದೂರುಗಳು ಬಂದಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಿಜಯಪುರ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.