• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಳವಾಡ ಟೋಲ್ ವಿರುದ್ಧ ಅನ್ನದಾತರ ಆಕ್ರೋಶ
ವಿಜಯಪುರ: ಯಾವುದೇ ಮೂಲಭೂತ ಸೌಕರ್ಯಗಳನ್ನು ನೀಡದೇ ತಾಲೂಕಿನ ಮುಳವಾಡ ಬಳಿ ಟೋಲ್‌ ಪ್ಲಾಜಾವನ್ನು ಏಕಾಏಕಿ ಪ್ರಾರಂಭಿಸಿ ಟೋಲ್ ಸಂಗ್ರಹ ಮಾಡುತ್ತಿದೆ. ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಸೇತುವೆ ಸಂಪೂರ್ಣ ಮಾಡದೇ ಹಾಗೂ ಅಲ್ಲಿ ಮೂಲಸೌಲಭ್ಯಗಳನ್ನು ನೀಡಿದ ನಂತರವೇ ಟೊಲ್ ಸಂಗ್ರಹ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರೈಲ್ವೆ ಸೇತುವೆ ನಿರ್ಮಿಸದೇ ಟೊಲ್ ಸಂಗ್ರಹಿಸುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದರು.
ತೊಗರಿ ಬೆಳೆಗೆ ಪರಿಹಾರಕ್ಕೆ ಆಗ್ರಹ
ಸಿಂದಗಿ ಮತ್ತು ಆಲಮೇಲ ತಾಲೂಕಿನ ರೈತರು ಬೆಳೆದ ತೊಗರಿ ಬೆಳೆ ಈ ಬಾರಿ ನಷ್ಟದಲ್ಲಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸರ್ವೇ ಮಾಡಿಸಿ ಸರ್ಕಾರಕ್ಕೆ ವಾಸ್ತವಿಕ ವರದಿಯನ್ನು ಸಲ್ಲಿಸಿ ಸೂಕ್ತ ಪರಿಹಾರ ನೀಡುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಸಿಂದಗಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮತ್ತು ತಾಲೂಕು ಕೃಷಿ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.
ಇಂದು ವೆಂಕಟೇಶ್ವರ ಜಾತ್ರಾ ಮಹೋತ್ಸವ
ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಹತ್ತಿರ ಇರುವ ಶ್ರೀ ವೆಂಕಟೇಶ್ವರ ದೇವಾಲಯದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ಡಿ.6 ರಂದು ಬೆಳಗ್ಗೆ ೧೦ ಗಂಟೆಗೆ ಜಾತ್ರಾ ಮಹೋತ್ಸವದ ಪ್ರಯುಕ್ತ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ದೇವಾಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಎಲ್.ಆರ್.ಅಂಗಡಿ ತಿಳಿಸಿದ್ದಾರೆ.
ಯೋಗ್ಯ ಅಲ್ಲದವರು ಸಿಎಂ ಸ್ಥಾನ ಕೇಳಬಾರದು
ನಮ್ಮ ಜಿಲ್ಲೆಯವರು ಸಿಎಂಯಾದರೆ ನಮಗೆ ಖುಷಿ ಇದೆ. ಪಕ್ಷಕ್ಕಾಗಿ ಶ್ರಮಪಟ್ಟವರು ಆಗಲಿ, ಯೋಗ್ಯ ಅಲ್ಲದವರು ಸಿಎಂ ಸ್ಥಾನ ಕೇಳಬಾರದು. ಜಿಲ್ಲೆಗೆ ಯೋಗ್ಯವಾಗದವರು ರಾಜ್ಯ ಆಳಲು ಹೋಗ್ತಿವಿ ಎಂದು ಹೇಳಿಕೊಳ್ಳಬಾರದು. ವಾಸ್ತವಿಕತೆ ಅರಿತು ಸಿಎಂ ಸ್ಥಾನ ಕೇಳಲಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಟಾಂಗ್‌ ನೀಡಿದರು.
ಕಳಪೆ ತೊಗರಿ ಬೀಜ ಕುರಿತು ಅಧಿವೇಶನದಲ್ಲಿ ಚರ್ಚೆ
ಕೃಷಿ ಇಲಾಖೆಯಿಂದ ವಿತರಣೆ ಮಾಡಿದ ತೊಗರಿ ಬೀಜ ಕಳಪೆಯಾಗಿದ್ದರಿಂದ ತೊಗರಿ ಬೆಳೆಗೆ ಕಾಯಿ ಹತ್ತಿರುವುದಿಲ್ಲ ಎಂಬ ಅಳಲು ಕೆಲ ರೈತರು ತೊಡಿಕೊಂಡಿದ್ದು, ರೈತರಿಗೆ ಆಗಿರುವ ಅನ್ಯಾಯ ಸರಿದೂಗಿಸುವ ಕುರಿತು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಪರವಾಗಿ ಸರ್ಕಾರದ ಗಮನ ಸೆಳೆಯುವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.
ರಥ ಎಳೆದು ಸಂಭ್ರಮಿಸಿದ ಮಹಿಳೆಯರು
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದಲ್ಲಿ ಮಂಗಳವಾರ ಶ್ರೀವೀರಭದ್ರ ದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿಯೇ ಅತ್ಯಂತ ವಿಶಿಷ್ಟವಾಗಿ ಇಲ್ಲಿ ಮಹಿಳೆಯರೆ ರಥವನ್ನು ಎಳೆಯುವುದು ವಾಡಿಕೆ.
ಅಕ್ರಮ ಅಡ್ಡೆಗಳ ಮೇಲೆ ದಾಳಿ: 8 ಸಿಲಿಂಡರ್ ವಶ
ವಿಜಯಪುರ: ನಗರದ ಇಬ್ರಾಹಿಂ ರೋಜಾ, ಸಾಯಿ ಪಾರ್ಕ್‌, ಬಂಜಾರಾ ಕ್ರಾಸ್‌ ಸೇರಿದಂತೆ ವಿವಿಧೆಡೆ ಅನಧಿಕೃತ ಅಡ್ಡೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 8 ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗೃಹೋಪಯೋಗಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯೋದ್ಯಮಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ನಯೀಮ ಅತ್ತಾರ ಹಾಗೂ ಸಿಬ್ಬಂದಿ ಒಟ್ಟು 8 ಗ್ಯಾಸ್‌ ತುಂಬಿದ ಗೃಹೋಪಯೋಗಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಿ
ಕನ್ನಡಪ್ರಭ ವಾರ್ತೆ ಇಂಡಿ ಜಾಗತಿಕ ತಾಪಮಾನ ನಿಯಂತ್ರಣ ನಮ್ಮೆಲ್ಲರ ಕರ್ತವ್ಯ, ನೀರನ್ನು ಅನಾವಶ್ಯಕವಾಗಿ ಪೋಲು ಮಾಡಬಾರದು. ನೀರೆತ್ತಲು ಹಾಗೂ ಸಾಗಿಸಲು ವಿದ್ಯುತ್ ಬೇಕು. ಆದುದರಿಂದ ನೀರನ್ನು ಮಿತವಾಗಿ ಬಳಸಿದರೆ ವಿದ್ಯುತ್ತಿನ ಉಳಿತಾಯ ಸಾಧ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ.ಆರ್. ಬಿ.ಬೆಳ್ಳಿ ಹೇಳಿದರು.
ಯುವಕರಲ್ಲಿ ಸ್ಪರ್ಧಾ ಮನೋಭಾವ ಬೆಳೆಯಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಮಕ್ಕಳು ದೇಶದ ಸಂಪತ್ತು ಎಂದು ಹೇಳಿದರೆ ಸಾಲದು ಮಕ್ಕಳು ಎಲ್ಲ ರಂಗದಲ್ಲೂ ಪ್ರತಿನಿಧಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸದೃಢ ಮನಸೇ ವಿಶೇಷಚೇತನರ ಸಾಧನೆಗೆ ಬಲ
ಕನ್ನಡಪ್ರಭ ವಾರ್ತೆ ವಿಜಯಪುರಜೀವನದಲ್ಲಿ ಸಾಧನೆ ಮಾಡಲು ಮನಸೇ ಮುಖ್ಯ, ಮನಸಿದ್ದಲ್ಲಿ ಮಾರ್ಗ ಎಂಬಂತೆ ವಿಶೇಷಚೇತನರು ಒಂದು ವಿಶೇಷ ಸದೃಢ ಮನಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ, ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 377
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved