ಅಹಿಂಸಾ ಚಳವಳಿಯಿಂದ ಬ್ರೀಟಿಷರ ಓಡಿಸಿದ್ದ ಮಹಾತ್ಮಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗಾಂಧೀಜಿ ಕೇವಲ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಚಿಂತಕ, ಸುಧಾರಕ, ತತ್ವಜ್ಞಾನಿ ಕೂಡ ಆಗಿದ್ದರು. ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಯವರ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶಾಭಿಮಾನ ಮೆರೆಯಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.