ಗಡಿ ಗ್ರಾಮಗಳಲ್ಲಿ ಅಗತ್ಯ ಸೌಲಭ್ಯಕ್ಕೆ ಯತ್ನಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ 742 ಗಡಿ ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ. ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.