ತಾಳಿಕೋಟೆ ಸಮ್ಮೇಳನ ಯಶಸ್ವಿಗೊಳಿಸೋಣಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಳಿಕೋಟಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಮುದ್ದೇಬಿಹಾಳ ತಾಲೂಕಿನ ಎಲ್ಲ ಸಾಹಿತ್ಯ ಪ್ರೇಮಿಗಳು, ವಿದ್ಯಾರ್ಥಿಗಳು, ಮಹಿಳೆಯರು, ಶಿಕ್ಷಕ ವೃಂದ, ರಾಜಕೀಯ ಗಣ್ಯರು ಸೇರಿದಂತೆ ಎಲ್ಲರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಮನವಿ ಮಾಡಿದರು.