ಕ್ರೀಡೆಯಿಂದ ದೇಹಕ್ಕೆ ಶಕ್ತಿ, ಮನಸ್ಸಿಗೆ ಶಾಂತಿಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆ ಕೇವಲ ಒಂದು ದಿನದ ಚಟುವಟಿಕೆಯಾಗದೆ, ಅದು ದಿನನಿತ್ಯದ ಅವಿಭಾಜ್ಯ ಅಂಗವಾಗಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಬಿಂದುರಾಣಿ.ಜಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೧೮ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.