ಕನ್ನಡ ಸಾಹಿತ್ಯ ಸಮ್ಮೇಳನ ಅಥ೯ಪೂಣ೯ವಾಗಿ ಆಚರಿಸಿಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ, ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಮ್ಮೇಳನವನ್ನು ತಾಲೂಕಿನ ಇವಣಗಿ ಗ್ರಾಮದಲ್ಲಿ ಆಯೋಜನೆ ಮಾಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ಗ್ರಾಮದಲ್ಲಿ ಸೆ.26 ರಂದು ಮತ್ತೊಂದು ಸಭೆ ಮಾಡಲು ತೀರ್ಮಾನಿಸಲಾಯಿತು.