ಜೀವನಕ್ಕೆ ಭದ್ರತೆಯ ಆಸರೆಯಾಗುವ ಎಲ್ಐಸಿಕನ್ನಡಪ್ರಭ ವಾರ್ತೆ ವಿಜಯಪುರ: ಎಲ್‌ಐಸಿ ಪ್ರತಿನಿಧಿಗಳು ಶ್ರಮ ಜೀವಿಗಳು, ತಾಳ್ಮೆಯಿಂದ ಸೇವೆ ಒದಗಿಸಿ, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆ ತಂದುಕೊಡುವಲ್ಲಿ ಇವರ ಪಾತ್ರ ಬಹುಮುಖ್ಯವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ನಗರದ ಬಸವ ಭವನ ಮಂಗಲ ಕಾರ್ಯಾಲಯದಲ್ಲಿ ಭಾರತೀಯ ವಿಮಾ ನಿಗಮದ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿನಿಧಿಗಳ ಸಂಘದ 2024-25ನೇ ಸರ್ವ ಸಾಧಾರಣ ಸಭೆ ಹಾಗೂ ಪ್ರತಿನಿಧಿಗಳಿಗಾಗಿ ಶೈಕ್ಷಣಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.