• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಾಸಕ ಮುನಿರತ್ನ ಗಡೀಪಾರಿಗೆ ಆಗ್ರಹ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು, ಅವರನ್ನು ಬಿಜೆಪಿ ವರಿಷ್ಠರು ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಜೊತೆಗೆ ಶಾಸಕನ ಆಸ್ತಿ ಪಾಸ್ತಿ ಸರ್ಕಾರ ಸ್ವಾಧೀನಪಡಿಸಿಕೊಂಡು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದವು.
ಆರೋಗ್ಯವಂತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚೆಗೆ ಮಕ್ಕಳು ಮಾತ್ರವಲ್ಲದೆ ಹರೆಯದವರಲ್ಲೂ ಅಪೌಷ್ಟಿಕತೆ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುತ್ತಿದೆ. ಅಪೌಷ್ಟಿಕತೆ ನಿವಾರಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಿಂದಗಿ ಸಿಡಿಪಿಒ ಶಂಭುಲಿಂಗ ಹಿರೇಮಠ ಹೇಳಿದರು.
ಸ್ವಚ್ಛತಾ ಹಿ ಸೇವಾ ಅಭಿಯಾನ ವಿದ್ಯುಕ್ತ ಚಾಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ವಿದ್ಯುಕ್ತ ಚಾಲನೆ ನೀಡಿದರು. ಅಭಿಯಾನದ ಅಂಗವಾಗಿ ಜಿಪಂ ಎಲ್ಲಾ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ ಮತ್ತು ಉದ್ಯಾನ ಸ್ಥಳವು ಸೇರಿದಂತೆ ಒಳಾಂಗಣ ಮತ್ತು ಹೊರ ಆವರಣಗಳನ್ನು ಸ್ವಚ್ಛತೆ ಮಾಡಲಾಯಿತು. ಕರ್ತವ್ಯ ಸ್ಥಳದಲ್ಲಿಯೂ ಸ್ವಚ್ಛತೆ ಕಾಪಾಡಬೇಕು ಎಂದು ಸಿಇಒ ಸೂಚನೆ ನೀಡಿದರು. ಇದೇ ವೇಳೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಆಲಮೇಲ ಪ.ಪಂನಲ್ಲಿ ಕಾಂಗ್ರೆಸ್‌ ಬಿಜೆಪಿ ದೋಸ್ತಿ
ಕನ್ನಡಪ್ರಭ ವಾರ್ತೆ ಆಲಮೇಲ ಕಳೆದ ಒಂದೂವರೆ ತಿಂಗಳಿನಿಂದ ಕುತೂಹಲ ಕೆರಳಿಸಿದ್ದ ಆಲಮೇಲ ಪಟ್ಟಣ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮುಗಿದಿದ್ದು, ಕಾಂಗ್ರೆಸ್‌ ಬಿಜೆಪಿ ದೋಸ್ತಿಯಾಗುವ ಮೂಲಕ ಸ್ಥಾನಗಳನ್ನು ಹಂಚಿಕೊಂಡಿವೆ. ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿದ್ದು, ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಪಾಲಾಗಿದೆ. ಮಂಗಳವಾರ ಪಟ್ಟಣದ ಪಟ್ಟಣ ಪಂಚಾಯತಿ ಕಚೇರಿಯಲ್ಲಿ 11ಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸಾಧಿಕ್‌ ಸುಂಬಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ 4ನೇ ವಾರ್ಡ್‌ ಸದಸ್ಯೆ ಸುಮಾ ಕತ್ತಿ ಮಾತ್ರ ನಾಮಪತ್ರ ಸಲ್ಲಿಸಿದರು.
ಬಿಜಾಪುರ ಸೈನಿಕ ಶಾಲೆಯ 61ನೇ ಸಂಸ್ಥಾಪನಾ ದಿನ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸೈನಿಕ ಶಾಲೆಯ 61ನೇ ಸಂಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯತು.ಬೆಂಗಳೂರಿನ ಎವಿಎಸ್ಎಂ, ವಿಎಂ, ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, ಹೆಡ್ ಕ್ವಾರ್ಟರ್ಸ್ ಟ್ರೈನಿಂಗ್ ಕಮಾಂಡ್ ಏರ್ ಮಾರ್ಷಲ್ ನಾಗೇಶ್ ಕಪೂರ್ ಮಾತನಾಡಿ, ಉತ್ತಮ ಶಿಕ್ಷಣವು ಬಲವಾದ ಅಡಿಪಾಯವನ್ನು ಒದಗಿಸುತ್ತದೆ. ಈ ಆಧುನಿಕ ಮತ್ತು ಸ್ಪರ್ಧಾತ್ಮಕ ಪ್ರಪಂಚದ ಸವಾಲುಗಳನ್ನು ಎದುರಿಸಲು ಕೌಶಲ್ಯಗಳು ಅವಶ್ಯಕವಾಗಿವೆ. ಅವು ನಿಮ್ಮನ್ನು ಸದೃಢ ಗೊಳಿಸುತ್ತವೆ ಎಂದು ಹೇಳಿದರು.
ರಾಜ್ಯ ಕ್ರಿಕೆಟ್ ತಂಡಕ್ಕೆ ಶ್ರೇಯಾ ಚವ್ಹಾಣ ಆಯ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರ: 19 ವರ್ಷ ವಯೋಮಾನದ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಹಿಳಾ ಟಿ-20 ಹಾಗೂ ಏಕದಿನ ಸರಣಿಗೆ ನಗರದ ಶ್ರೇಯಾ ಚವ್ಹಾಣ ಆಯ್ಕೆಯಾಗಿದ್ದಾಳೆ. ರಾಜ್ಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಶ್ರೇಯಾ ಚವ್ಹಾಣ ಅಕ್ಟೋಬ‌ರ್ 1ರಿಂದ ಚೆನೈಯಲ್ಲಿ ನಡೆಯಲಿರುವ ರಾಜ್ಯ ಮಹಿಳಾ ಅಂಡರ್-19 ತಂಡದಲ್ಲಿ ಆಡಲಿದ್ದಾರೆ. ಈ ತಂಡವು ಗುಜರಾತ, ಬರೋಡಾ, ಛತ್ತಿಸಗಡ, ಮಿಜೋರಾಂ ಹಾಗೂ ಮಹಾರಾಷ್ಟ್ರ ತಂಡಗಳ ಜೊತೆಗೆ ಏಕದಿನ ಶ್ರೇಣಿ ಪಂದ್ಯಗಳನ್ನು ಆಡಲಿದೆ.
ಡಾ.ಕೈಲಾಸನಾಥ ಶ್ರೀಗಳ ಸೇವೆ ವಿಶ್ವ ದಾಖಲೆ
ಕನ್ನಡಪ್ರಭ ವಾರ್ತೆ ಕೊಲ್ಹಾರಹಳೆ ಕೊಲ್ಹಾರ ಬಳಿಯ ಕೃಷ್ಣಾ ನದಿ ತಟದಲ್ಲಿರುವ ಶೀಲವಂತ ಹಿರೇಮಠದ ಡಾ.ಕೈಲಾಸನಾಥ ಶ್ರೀಗಳ ಆಧ್ಯಾತ್ಮಿಕ ಸಮಾಜ ಸೇವೆಯು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಶನಿವಾರ ಬೆಂಗಳೂರು ಮಲ್ಲೇಶ್ವರಂನ ಸೇವಾ ಸದನ ಸಾಂಸ್ಕೃತಿಕ ಭವನದಲ್ಲಿ ಜರುಗಿದ ರಿಯಾಲಿಟಿ ಬುಕ್ ಆಫ್ ವರ್ಲ್ಡ್‌ ರಿಕಾರ್ಡ್‌ನಲ್ಲಿ ಗಿನ್ನಿಸ್ ದಾಖಲೆ ಸಮಾರಂಭದಲ್ಲಿ ಶ್ರೀಗಳಿಗೆ ಗಿನ್ನಿಸ್ ದಾಖಲೆ ಸಮಿತಿ ಪದಾಧಿಕಾರಿಗಳಾದ ಡಾ.ಹರ್ಷವರ್ಧನ, ಡಾ.ವಂದನಾ ಡಿಸೋಜ, ಡಾ.ಮಹೇಶಾನಂದಜಿ, ಡಾ.ನಂಬಿ ರಾಜ್, ಡಾ.ವೇದಾ ದೀಕ್ಷಿತ, ಡಾ.ರುಭೇರಿ ಇಮ್ಯಾನುಯೆಲ್‌, ಡೆಪ್ಯುಟಿ ಕಮಿಷನರ್ ಡಾ.ಶ್ರೀನಿವಾಸ, ಡಾ.ಎ.ಪಿ.ಶ್ರೀನಾಥ, ಡಾ.ಅನಂತಮೂರ್ತಿ ಕುಪ್ಪುಸ್ವಾಮಿ, ಡಾ.ಸೆಲ್ವನ್ ಸೇರಿದಂತೆ ಅನೇಕ ಗಿನ್ನಿಸ್ ದಾಖಲೆಯ ಪ್ರಶಸ್ತಿ ನೀಡಿ ಗೌರವಿಸಿದರು.
ಝಳಕಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಕನ್ನಡಪ್ರಭ ವಾರ್ತೆ ಚಡಚಣ ವಿಶ್ವದಲ್ಲಿಯೇ ಬಿಜೆಪಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಪಕ್ಷ ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಅನಿಸುತ್ತದೆ ಎಂದು ಮಾಜಿ ಸಚಿವ ಅಪ್ಪಾಸಾಬ ಪಟ್ಟಣಶೆಟ್ಟಿ ಹೇಳಿದರು. ಸಮಿಪದ ಝಳಕಿ ಗ್ರಾಮದಲ್ಲಿ ನಡೆದ ಬಿಜೆಪಿ ಇಂಡಿ ಮಂಡಲ ಹಾಗೂ ಭತಗುಣಕಿ ಶಕ್ತಿ ಕೇಂದ್ರದಿಂದ ನಡೆಸಿರುವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಮಾತನಾಡಿದರು.
ಬಿಜೆಪಿ ಸದಸ್ಯತ್ವ ಹೆಚ್ಚಿಸಿದಷ್ಟು ಪಕ್ಷಕ್ಕೆ ಲಾಭ
ಕನ್ನಡಪ್ರಭ ವಾರ್ತೆ ನಾಲತವಾಡ:ಬಿಜೆಪಿ ಪಕ್ಷವನ್ನು ಬಲಪಡಿಸಲು ಎಲ್ಲರು ನಿರಂತರ ಶ್ರಮಿಸಬೇಕು, ಈ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿ.ಪಂ ಮಾಜಿ ಸದಸ್ಯ ಬಿಜೆಪಿ ಮುಖಂಡರಾದ ಗಂಗಾಧರ ನಾಡಗೌಡ ಹೇಳಿದರು
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 340
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved