ಜಿಗಜಿಣಗಿ ಬಗ್ಗೆ ಹಗುರ ಮಾತು ಶೋಭೆ ತರಲ್ಲಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ನಾದ ಗ್ರಾಮದಲ್ಲಿ ಕೆಪಿಟಿಸಿಎಲ್ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನೆ ವೇಳೆ ಸಂಸದ ರಮೇಶ ಜಿಗಜಿಣಗಿ ಬಗ್ಗೆ ಟೀಕೆ ಮಾಡಿದ್ದ ಶಾಸಕ ಯಶವಂತರಾಯಗೌಡ ಪಾಟೀಲ ಅವರ ವಿರುದ್ಧ ಬಿಜೆಪಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದರಾದ ರಮೇಶ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಶೋಭೆ ತರಲ್ಲ. ಇದೇ ಮುಂದುವರಿದರೇ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.