ಮಕ್ಕಳ ವೈಜ್ಞಾನಿಕ ಕೌಶಲಕ್ಕೆ ಸಮನ್ವಯ ಹಬ್ಬ ಸಾಕ್ಷಿಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ.ಎಂ.ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್.ಎಸ್.ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಠಮಿ, ಫುಡ್ ಫೆಸ್ಟಿವಲ್, ಹೊಸ ಬೋಧನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು.