ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಡಿಸಿವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರಯಾಣಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಯಾವುದೇ ಪ್ರಯಾಣಿಕರಿಗೆ ಅನಾನೂಕೂಲವಾಗದಂತೆ ಎಚ್ಚರಿಕೆ ವಹಿಸಬೇಕು. ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರು, ಸೂಕ್ತ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.