ಲಿಂಗದೀಕ್ಷೆ ಮೋಕ್ಷಕ್ಕೆ ಮಹಾದ್ವಾರವೀರಶೈವ ಲಿಂಗಾಯತ ಧರ್ಮದಲ್ಲಿ ಗುರುವು ಶಿಷ್ಯನಿಗೆ ದಯಪಾಲಿಸುವ ಲಿಂಗದೀಕ್ಷೆಯನ್ನು ಯಾವುದೇ ಜಾತಿ ಭೇದವಿಲ್ಲದೇ ಸರ್ವರೂ ಪಡೆದುಕೊಳ್ಳಲು ಮುಕ್ತ ಅವಕಾಶವಿದ್ದು, ಮೋಕ್ಷ ಮಾರ್ಗದಲ್ಲಿ ಸಾಗಲು ಇದುವೇ ಮೊದಲ ಅಡಿಪಾಯ ಆಗಿರುವುದರಿಂದ ಇದು ಮೋಕ್ಷಕ್ಕೆ ಮಹಾದ್ವಾರವಾಗಿದೆ ಎಂದು ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.