ಗ್ರಾಮೀಣ ಜನರಿಗೆ ಶುದ್ಧ ನೀರು, ಸ್ವಚ್ಛತೆ ಕಲ್ಪಿಸಿಕನ್ನಡಪ್ರಭ ವಾರ್ತೆ ಕೊಲ್ಹಾರ ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್.ಟಿ.ಪಿ.ಸಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವಿಶೇಷವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಒದಗಿಸುವ ನಿಟ್ಟಿನಲ್ಲಿ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ್ ಹೇಳಿದರು.