ಭಯಪಡಬೇಡಿ, ಸರ್ಕಾರ ಸಮಸ್ಯೆಗೆ ಸ್ಪಂದಿಸಲಿದೆಕನ್ನಡಪ್ರಭ ವಾರ್ತೆ ವಿಜಯಪುರ ಯಾರು ಭಯಪಡುವ ಅವಶ್ಯಕತೆ ಇಲ್ಲ, ಸರ್ಕಾರ ಹಾಗೂ ಜಿಲ್ಲಾಡಳಿತ ನಿಮ್ಮೊಂದಿಗಿದ್ದು, ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಲಿದೆ. ಪ್ರವಾಹದಿಂದ ಹಾನಿಗೊಳಗಾದ ಬೆಳೆ, ಮನೆ ಹಾನಿಯನ್ನು ಸಮಗ್ರವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.