ನುಡಿದಂತೆ ನಡೆದ ಸಂತ ಭಕ್ತ ಕನಕದಾಸಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನುಡಿದಂತೆ ಬಾಳಿದ ಸಂತ ಭಕ್ತ ಕನಕದಾಸರ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಾಲೂಕು ಕುರುಬ ಸಂಘದ ಅಧ್ಯಕ್ಷ ಗುರುನಾಥ ಮುರಡಿ ಮಾತನಾಡಿ, ಕನಕದಾಸರು ಜಾತಿ ಪದ್ಧತಿ, ಮೇಲು ಕೀಳು, ಅಸ್ಪೃಶ್ಯತೆಯಂತಹ ವ್ಯವಸ್ಥೆಗಳನ್ನು ವಿರೋಧಿಸಿ ಸಾಮಾಜಿಕ ನ್ಯಾಯ ಮತ್ತು ಪ್ರಗತಿಗೆ ಶ್ರಮಿಸಿದ ಶ್ರೇಷ್ಠ ಸಂತರಾಗಿದ್ದರು ಎಂದರು.