ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಸೋಮನಕಟ್ಟಿಬಸವನಬಾಗೇವಾಡಿ: ಮಾಡು ಇಲ್ಲವೇ ಮಡಿ ಕರೆ ನೀಡಿದ ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು. ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕಾಡಳಿತ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಗಾಂಧೀಜಿಯವರ ನಿಸ್ವಾರ್ಥತೆ, ಮಾತೃಭಕ್ತಿ, ಸಾಮಾಜಿಕ ಕಳಕಳಿ, ಸತ್ಯ, ಅಹಿಂಸೆ, ಸಾಮರಸ್ಯ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕಿದೆ.