ವೀರಶೈವ, ಲಿಂಗಾಯತ ಸಮಾಜದ ಅಭಿವೃದ್ಧಿಗೆ ಯತ್ನಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಲಿಂಗಾಯತರಲ್ಲಿಯೇ ಲಿಂಗಾಯತ ಮತ್ತು ವೀರಶೈವ ಎಂಬ ಭಿನ್ನಾಭಿಪ್ರಾಯಗಳಿದ್ದು, ಅವುಗಳನ್ನು ಸರಿಪಡಿಸಲು ತಮ್ಮ ಅಧಿಕಾರದ ಅವಧಿಯಲ್ಲಿ ಯತ್ನಿಸುವುದಾಗಿ ತಾಲೂಕು ವೀರಶೈವ ಮಹಾಸಭಾದ ನೂತನ ಅಧ್ಯಕ್ಷ ವೆಂಕನಗೌಡ ಪಾಟೀಲ ಹೇಳಿದರು. ಪಟ್ಟಣದ ಹುಡ್ಕೊ ಬಡಾವಣೆಯಲ್ಲಿರುವ ಹಸಿರು ತೋರಣ ಉದ್ಯಾನವನದಲ್ಲಿ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಅದನ್ನು ಬಳಸಿಕೊಂಡು ಅಗತ್ಯ ಇರುವವರಿಗೆ ಸಹಾಯ ಮಾಡಬೇಕು.