ರೈತರಿಗೆ ತೊಗರಿ ನಷ್ಟ ಪರಿಹಾರ ನೀಡಿ: ನಡಹಳ್ಳಿಕನ್ನಡಪ್ರಭ ವಾರ್ತೆ ತಾಳಿಕೋಟೆ ಜಿಲ್ಲೆಯಲ್ಲಿ ೫.೩೪ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, ಖಾಸಗಿ ಏಜೆನ್ಸಿಗಳ ಮೂಲಕ ಕಳಪೆ ತೊಗರಿ ಬೀಜ ವಿತರಿಸಿದ್ದರಿಂದ ಬೆಳೆ ಕಾಳುಕಟ್ಟದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಏಜೆನ್ಸಿಗಳ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ರೈತರಿಗೆ ನಷ್ಟ ಪರಿಹಾರ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಆಗ್ರಹಿಸಿದರು.