ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸುನೀಲಗೌಡ ಒತ್ತಾಯವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನವನ್ನು ಹೆಚ್ಚಿಸುವ ಬಗ್ಗೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಸದನದಲ್ಲಿ ಪ್ರಸ್ತಾಪಿಸಿದರು. ಅಲ್ಲದೇ, ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಮಾಡಿದ್ದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೂಡ ಒಪ್ಪಿಗೆ ನೀಡಿದರು.