ಹಿರಿಯ ಹೋರಾಟಗಾರ ಭೀಮಶಿ ಕಲಾದಗಿ ನಿಧನವಿಜಯಪುರ: ಜಿಲ್ಲೆಯ ಹಿರಿಯ ಹೋರಾಟಗಾರ, ಕಮ್ಯುನಿಸ್ಟ್ ಮುಖಂಡ ಭೀಮಶಿ ಕಲಾದಗಿ(87) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ತಮ್ಮ ಜನಪರ ಹೋರಾಟಗಳಿಂದ ನಾಡಿನಲ್ಲಿ ಹೆಸರಾಗಿದ್ದ ಭೀಮಶಿ ಕಲಾದಗಿ ಅವರು ಬರಗಾಲ ಭೀಮಶಿಯೆಂದೇ ಖ್ಯಾತರಾಗಿದ್ದರು. ಜಿಲ್ಲೆಯ ಮುಳವಾಡ ಏತ ನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ನೀರಾವರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ, ದಲಿತರಿಗಾಗಿ ಜೀವನವಿಡಿ ಹೋರಾಟ ಮಾಡಿದ್ದರು. ಅವರ ಅಗಲಿಕೆಯಿಂದ ಹಿರಿಯ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ.