ಜನರಿಗೆ ತೊಂದರೆಯಾಗದಂತೆ ವ್ಯಾಪಾರ ನಡೆಸಿಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಾದಚಾರಿಗಳಿಗೆ, ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿ ಬದಿಯ ವ್ಯಾಪಾರಸ್ಥರು ವ್ಯಾಪಾರ ವಹಿವಾಟು ನಡೆಸಬೇಕೆಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಸೂಚನೆ ನೀಡಿದರು. ಪಟ್ಟಣದ ಪುರಸಭೆಯಲ್ಲಿ ನಡೆದ ಬೀದಿ ಬದಿಯ ವ್ಯಾಪಾರಿಗಳ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಶಾಲೆ, ಆಸ್ಪತ್ರೆ, ಸರ್ಕಾರಿ ಕಟ್ಟಡ, ನ್ಯಾಯಾಲಯ, ಅಗ್ನಿಶಾಮಕ ಕಚೇರಿ ಮುಂತಾದ ಪ್ರಮುಖ ಪ್ರದೇಶದಿಂದ ಕನಿಷ್ಠ ೧೦೦ ಮೀಟರ್ ದೂರದಲ್ಲಿ ಬೀದಿ ಬದಿಯ ವ್ಯಾಪಾರಸ್ಥರು ತಮ್ಮ ವ್ಯಾಪಾರ ಮಾಡಬೇಕು.