ಫಸಲ್ ಬಿಮಾದಲ್ಲಿ ಅವ್ಯವಹಾರ: ಮತ್ತೊಮ್ಮೆ ಸಮೀಕ್ಷೆ ನಡೆಸಿಫಸಲ್ ಬಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ನಡೆದಿದೆ. ಸರ್ಕಾರ ತನಿಖಾ ತಂಡ ರಚಿಸಿ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಮತ್ತೊಮ್ಮೆ ಸಮೀಕ್ಷೆ ಮಾಡಿ ನಷ್ಟಗೊಂಡ ಎಲ್ಲ ರೈತರಿಗೂ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು, ರೈತ ಮುಖಂಡರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.