• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂ.ಬಿ.ಪಾಟೀಲರಿಂದ ಬನ್ನಿ ವಿನಿಮಯ
ಕನ್ನಡಪ್ರಭ ವಾರ್ತೆ ವಿಜಯಪುರ: ವಿಶ್ವವಿಖ್ಯಾತ ದಸರಾ ಹಬ್ಬದ ಹಿನ್ನೆಲೆ ನಗರದ ಮನೆಯಲ್ಲಿ ಬೆಳಗ್ಗೆಯಿಂದಲೇ ಬನ್ನಿ ವಿನಿಮಯ ಕಾರ್ಯದಲ್ಲಿ ಸಚಿವ ಎಂ.ಬಿ.ಪಾಟೀಲ ಭಾಗಿಯಾಗಿದ್ದಾರೆ. ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಬೆಳಗ್ಗೆಯಿಂದಲೂ ಕ್ಷೇತ್ರದ ಜನತೆ, ಅಭಿಮಾನಿಗಳು ಬನ್ನಿ ವಿನಿಮಯಕ್ಕೆ ಆಗಮಿಸುತ್ತಿದ್ದಾರೆ. ವಿದೇಶ ಪ್ರವಾಸ ಮುಗಿಸಿ ನಗರಕ್ಕೆ ಆಗಮಿಸಿರುವ ಸಚಿವರು ಪತ್ನಿ ಆಶಾ ಪಾಟೀಲ್, ಪುತ್ರ ಬಸನಗೌಡ ಪಾಟೀಲ ಕ್ಷೇತ್ರದ ಜನರೊಂದಿಗೆ ಬನ್ನಿ ವಿನಿಮಯದಲ್ಲಿ ಪಾಲ್ಗೊಂಡಿದ್ದರು.
ಗ್ಯಾರಂಟಿಗಳನ್ನು ಚುನಾವಣೆ ಮುಂಚೆ ಘೋಷಿಸಬೇಕಿತ್ತು
ಕನ್ನಡಪ್ರಭ ವಾರ್ತೆ ವಿಜಯಪುರ: ಸಿಎಂ ಸಿದ್ಧರಾಮಯ್ಯ ಚುನಾವಣೆಗೋಸ್ಕರವೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಇಲ್ಲವಾದರೆ ಚುನಾವಣೆ ಮುಂಚೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಬೇಕಿತ್ತು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ಹೊರಹಾಕಿದರು.
ಜಿಲ್ಲಾದ್ಯಂತ ಸಂಭ್ರಮದ ವಿಜಯದಶಮಿ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿಯಲ್ಲಿ ಒಂಭತ್ತು ದಿನಗಳ ಕಾಲ ನಿರಂತರವಾಗಿ ನಾಡದೇವಿಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ್ದ ಮಹಿಳೆಯರೆಲ್ಲ ಅದ್ಧೂರಿಯಿಂದ ವಿಜಯದಶಮಿ ಆಚರಿಸಿದರು. ಶನಿವಾರ ಜಿಲ್ಲೆಯ ಜನರು ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಿದರು. ಹಬ್ಬದ ಹಿನ್ನಲೆಯಲ್ಲಿ ನಗರದ ಮಾರುಕಟ್ಟೆಯಲ್ಲಿ ಹಣ್ಣು, ಹೂ, ಹಾರ, ತೆಂಗಿನಕಾಯಿ, ಕುಂಬಳಕಾಯಿ, ಬನ್ನಿ, ಬಾಳೆಗಿಡಗಳು ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದರು.
ಗ್ರಂಥಾಲಯ ಸ್ಥಳ ವೀಕ್ಷಿಸಿದ ಡಿಸಿ ಟಿ.ಭೂಬಾಲನ್
ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಬಗ್ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಬನ್ನಿ ಗಿಡಕ್ಕೆ ತಾಲೂಕಾಡಳಿತದಿಂದ ಪೂಜೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ನಾಗೂರ ರಸ್ತೆಯಲ್ಲಿನ ಬಸವನ ಕಟ್ಟೆಯ ಬನ್ನಿ ಮರಕ್ಕೆ ಸಂಪ್ರದಾಯದಂತೆ ತಾಲೂಕಾಡಳಿತದಿಂದ ಪೂಜೆ ಸಲ್ಲಿಸಿದ ನಂತರ ಬನ್ನಿ ಮುಡಿಯುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ವಿಜಯದಶಮಿ ಹಬ್ಬದ ಪೂಜಾ ಕಾರ್ಯವನ್ನು ರಾಮಾಚಾರಿ ಯಜುರ್ವೇದಿ ನಡೆಸಿಕೊಟ್ಟರು.
ಸರ್ಕಾರಿ ನೌಕರರಿಗೆ ಲಿಂಗರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಶಿರಸಂಗಿ ಲಿಂಗರಾಜ ಮಹಾರಾಜರ ತ್ಯಾಗ, ಶೈಕ್ಷಣಿಕ ಪ್ರೇಮ ಎಲ್ಲರಿಗೂ ದಾರಿದೀಪ ಎಂದು ಕವಲಗಿಯ ಅಭಿನವ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹೇಳಿದರು. ನಗರದಲ್ಲಿನ ಮನಿಯಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಲಿಂಗರಾಜ ಸಂಸ್ಥೆ, ವಿಜಯಪುರ ಜಿಲ್ಲಾ ಆದರ್ಶ ಶಿಕ್ಷಕರ ವೇದಿಕೆ ಹಾಗೂ ಬಸವನಬಾಗೇವಾಡಿ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಲಾಗಿದ್ದ ಶಿರಸಂಗಿ ಲಿಂಗರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ವೇಳೆ ಆಶೀವರ್ಚನ ನೀಡಿದರು.
ನಗರಕ್ಕೆ ಆಗಮಿಸಿದ ಗೌರಿ ಲಂಕೇಶ ಹತ್ಯೆ ಆರೋಪಿಗಳು
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ಶನಿವಾರ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹಿಂದೂ ಸಂಘಟನೆ ಮುಖಂಡರಿಂದ ಅದ್ಧೂರಿ ಸನ್ಮಾನ, ಸ್ವಾಗತ ಸಿಕ್ಕಿದೆ. ಆರೋಪಿಗಳಿಬ್ಬರು ನಗರದ ಕಾಳಿಕಾದೇವಿ ಮಂದಿರಕ್ಕೆ ಆಗಮಿಸಿ ತೆಂಗಿನಕಾಯಿ, ಕರ್ಪೂರ ಹಿಡಿದು ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ದಸರಾ: ಚಿನ್ನ ಗೆದ್ದ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮೈಸೂರಿನ ಚಾಮುಂಡೇಶ್ವರಿ ಜಿಲ್ಲಾ ಕ್ರೀಡಾಂಗಣ ಅಕ್ಟೋಬರ 3 ರಿಂದ 6ರವರೆಗೆ ಜರುಗಿದ ರಾಜ್ಯಮಟ್ಟದ ಸಿಎಂ ದಸರಾ ಕ್ರೀಡಾಕೂಟಗಳಲ್ಲಿ ಬಾಗಲಕೋಟೆ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.
ಅಭಿವೃದ್ಧಿಪರ ಚಿಂತನೆ ಹೊಂದಿರುವ ಯಶವಂತರಾಯಗೌಡರು
ಕನ್ನಡಪ್ರಭ ವಾರ್ತೆ ಇಂಡಿ ಜನ್ಮದಿನ ಆಚರಣೆ ಮುಖ್ಯವಲ್ಲ, ನಾವು ಸಮಾಜಮುಖಿ ಕಾರ್ಯಗಳು ಮಾಡುವುದು ಮುಖ್ಯ ಎಂದು ಶಾಸಕರು ಹೇಳುತ್ತಾರೆ. ಶಾಸಕರ ಜನ್ಮದಿನದ ಹೆಸರಿನಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಜಾವೀದ್‌ ಮೋಮಿನ್‌ ಹೇಳಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved