• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ದೇಗುಲಕ್ಕೆ ಕಲ್ಲೆಸೆದ ಆರೋಪಿಗಳ ಮಂಪರು ಪರೀಕ್ಷೆ ಮಾಡಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಗಣಪತಿ ಚೌಕ್‌ದಲ್ಲಿನ ಗಣೇಶ ದೇವಸ್ಥಾನದ ಗಾಜಿಗೆ ಕಲ್ಲೆಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಈ ಮೂಲಕ ಕೃತ್ಯದ ಹಿಂದಿರುವ ಶಕ್ತಿಗಳನ್ನು ಬಯಲಿಗೆ ಎಳೆಯಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.
ರಾಜ್ಯದಲ್ಲೇ ವಿಜಯಪುರದಲ್ಲಿದೆ ಹೆಚ್ಚು ವಕ್ಫ್‌ ಆಸ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಇದೆ. ವಕ್ಫ್ ಆಸ್ತಿಯ ಸದ್ಭಳಕೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು ೧.೧೨ ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ ೮೫ ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ ೨೩ ಸಾವಿರ ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಅದರ ಸಂರಕ್ಷಣೆಗೆ ಮುಂದಾಗುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ಅಹ್ಮದ ಖಾನ್ ಕರೆ ನೀಡಿದರು.
ವಿಭಿನ್ನ ಸೇವೆಗೆ ವಿಜಯಪುರ ಡಿಸಿಸಿ ಬ್ಯಾಂಕ್‌ ಮಾದರಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಜನಸ್ನೇಹಿ ಸೇವೆ ನೀಡುವಲ್ಲಿ ಬ್ಯಾಂಕ್‌ಗಳು ಇಂದು ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಮತ್ತು ಕೃಷಿಕರಿಗೆ ಸೇವೆ ನೀಡುವಲ್ಲಿ ಸಹಕಾರಿ ರಂಗ ಅಗ್ರಗಣ್ಯ. ವಿಜಯಪುರ ಡಿಸಿಸಿ ಬ್ಯಾಂಕ್‌ ಇಂತಹ ಸೇವೆ ನೀಡುವಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.
ನೌಕರರ ಸಂಘಟನೆಗಳ ಸಮಸ್ಯೆ ಆಲಿಸಿ ಸಚಿವ ಶಿವಾನಂದ ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಎರಡನೇ ದಿನವೂ ಪ್ರತಿಭಟನೆ ನಡೆಸಿತು. ಮುಂದುವರಿದ ಪ್ರತಿಭಟನಾ ಸ್ಥಳಕ್ಕೆ ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿದರು.
ಮಕ್ಕಳಲ್ಲಿ ದೇಶದ ಆಚಾರ, ವಿಚಾರ ಬೆಳೆಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಮಕ್ಕಳಿಗೆ ಐಷಾರಾಮಿ ಜೀವನ ತೋರಿಸಿ ಅವರಿಗೆ ಕಷ್ಟದ ಜೀವನವನ್ನು ಎದುರಿಸುವ ಆತ್ಮಸ್ಥೈರ್ಯ ಕಳೆದುಕೊಳ್ಳುವಂತೆ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ತಾಯಂದಿರರು ತಮ್ಮ ಮಕ್ಕಳಿಗೆ ನಮ್ಮ ದೇಶದ ಸಂಸ್ಕೃತಿ, ಆಚಾರ- ವಿಚಾರ ಬಗ್ಗೆ ಶರಣರ ಆದರ್ಶ ಜೀವನ ಹಾಗೂ ಮಾನವೀಯ ಮೌಲ್ಯಗಳನ್ನು ಬೋಧಿಸುವುದು ಅಗತ್ಯವಾಗಿದೆ ಎಂದು ಪ್ರವಚನಕಾರ ಐ.ಬಿ.ಹಿರೇಮಠ ಹೇಳಿದರು.
.ನಗರ ಅಭಿವೃದ್ಧಿಗೆ ಹೋರಾಟ ಮಾಡಿದ್ದು ಖುಷಿ ಇದೆ
ಕನ್ನಡಪ್ರಭ ವಾರ್ತೆ ಸಿಂದಗಿ ಕೇವಲ 17 ತಿಂಗಳ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಸಿಂದಗಿ ನಗರದ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸರ್ಕಾರದ ಅವಾಂತರದಿಂದ ಯೋಜನೆಗಳು ಸ್ಥಗಿತ
ಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿ ಸರ್ಕಾರವಿದ್ದಾಗ ಜಿಲ್ಲೆಯಲ್ಲಿ ಬಹುಹಳ್ಳಿ ಕುಡಿಯುವ ನೀರಿನ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಜಿಲ್ಲೆಯಲ್ಲಿರುವ 40ಕ್ಕೂ ಹೆಚ್ಚು ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಾಂತರದಿಂದ ಸ್ಥಗಿತವಾಗುವ ಹಂತಕ್ಕೆ ಬಂದಿವೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.
ಡೋಣಿ ನದಿ ಪ್ರವಾಹ ತಡೆ: ಕ್ರಮಕ್ಕೆ ಸೂಚನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ೨೧ ಹಾಗೂ ೨೨ನೇ ವಾರ್ಡಿಗೆ ಮೂಲಭೂತ ಸೌಕರ್ಯ ಒದಗಿಸದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕೂಡಲೇ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಾರ್ಡಿನಲ್ಲಿ ಚರಂಡಿಗಳನ್ನು ಸ್ವಚ್ಚವಾಗಿಡದ ಹಿನ್ನಲೆಯಲ್ಲಿ ದಿನಂಪ್ರತಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಇದರಿಂದ ಹಲವು ಕಾಯಿಲೆಗಳಿಗೆ ತುತ್ತಾಗಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದುರ್ಗಾ ಮಾತಾ ದೌಡ್‌ಗೆ ನಗರದಲ್ಲಿ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಅಂಗವಾಗಿ 9 ದಿನಗಳ ದುರ್ಗಾಮಾತಾ ದೌಡ್‌ಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಪ್ರತಿದಿನ ಸ್ವಾಮೀಜಿಯೊಬ್ಬರು ಭಗವಾ ಧ್ವಜ ಹಿಡಿದು ದೌಡ್‌ ನಡೆಸುತ್ತಾರೆ. ಇನ್ನು, ದೌಡ್ ಸಂಚರಿಸುವ ಮಾರ್ಗಗಳಲ್ಲಿ ರಂಗೋಲಿ ಅಲಂಕಾರ ಮಾಡಿ ಹೂವು ಎರಚಿ, ಮಹಿಳೆಯರು ಆರತಿ ಸ್ವಾಗತಿಸುತ್ತಾರೆ. ಸೋಮವಾರ ಬೆಳಿಗ್ಗೆ ನಗರದ ಶಿವಾಜಿ ವೃತ್ತದಲ್ಲಿ ದೌಡ್​​ಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿಗಳು ಚಾಲನೆ ನೀಡಿದರು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved