ಆಲಮಟ್ಟಿ ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಯಾಮಾರಿಸುತ್ತಿದ್ದು, ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.
ಜಾತಿ ಬೇಧ ಮರೆತು ಎಲ್ಲರಲ್ಲೂ ಭಾರತೀಯರು ಎಂಬ ಭಾವ ಮೂಡಲಿ ಎಂದು ಉಜ್ಜೈನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಜಗದ್ಗುರುಗಳು ಸಲಹೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಪ್ರಾರಂಭವಾಗಿಲ್ಲ. ದಲಿತರ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗದವರ ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ಆದರೆ, ಅವರದ್ದೆ ನಿಗಮದ ಹಣ ಲೂಟಿ ಹೊಡೆದ ಪಾಪಿಷ್ಠ ಸರ್ಕಾರವಿದು.