• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಾನದಲ್ಲಿ ಪತ್ತೆಯಾದ ದೊಡ್ಡ ಮೊಸಳೆ ಸೆರೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಆಲಮಟ್ಟಿ ಅಣೆಕಟ್ಟು ಕೆಳಭಾಗದ ಮೊಘಲ್ ಉದ್ಯಾನದ ಬಳಿ ತಡರಾತ್ರಿ ಕಾಣಿಸಿದ ಮೊಸಳೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ತಡರಾತ್ರಿ 12.30ರ ಸುಮಾರಿನಲ್ಲಿ ಮೊಘಲ್ ಉದ್ಯಾನದಲ್ಲಿ ಮೊಸಳೆ ಇರುವುದನ್ನು ರಾತ್ರಿ ಕಾವಲು ಕಾಯುತ್ತಿದ್ದ ಕೆಎಸ್‌ಐಸ್‌ಎಫ್ ಪೊಲೀಸರ ಗಮನಕ್ಕೆ ಬಂದಿದೆ.
ಸರ್ಜಿಫೆಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ
ಸರ್ಜಿಫೆಸ್ಟ್ ಸಮ್ಮೇಳನಗಳು ಪರೀಕ್ಷೆ ತಯಾರಿಯಲ್ಲಿರುವ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಪತಿ ಡಾ.ಅರುಣ ಇನಾಮದಾರ ಹೇಳಿದರು.
ಬಾಬಾನಗರದಲ್ಲಿ ಎರಡು ನಾಲಿಗೆಯ ವಿಚಿತ್ರ ಕರು ಜನನ
ಕನ್ನಡಪ್ರಭ ವಾರ್ತೆ ತಿಕೋಟಾವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ವಿಚಿತ್ರ ಕರುವೊಂದು ಜನಿಸುವ ಮೂಲಕ ಸ್ಥಳೀಯ ಜನರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಕರುವಿಗೆ ಒಂದು ಮುಖ, ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿದ್ದು, ಇದು ಅಚ್ಚರಿಗೆ ಕಾರಣವಾಗಿದೆ. ಬಾಬಾನಗರದ ರೈತ ಮಹಿಳೆ ಸಾವಿತ್ರಿ ನಾಗೂರಿ ಎಂಬುವರ ತೋಟದಲ್ಲಿ ಈ ವಿಚಿತ್ರ ಕರು ಜನನವಾಗಿದೆ. ಶನಿವಾರ ಸಂಜೆ ಜನಿಸಿರುವ ಈ ವಿಚಿತ್ರ ಕರುವನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪಶು ವೈದ್ಯರು ವಿಚಿತ್ರ ಕರುವಿನ ಆರೋಗ್ಯ ಪರೀಕ್ಷೆ ನಡೆಸಿದ್ದು, ಕರುವಿನ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯೋತ್ಸವಕ್ಕೆ ಅಧಿಕಾರಿ, ಸಿಬ್ಬಂದಿ ಭಾಗಿ ಕಡ್ಡಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತದಿಂದ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಜಾತಿಗಣತಿ ವರದಿ ತಕ್ಷಣವೇ ಜಾರಿಯಾಗಲಿ
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಎಂ.ಬಿ.ಪಾಟೀಲ ಯೋಜನೆಗಳಿಂದ ರೈತರಿಗೆ ಭದ್ರತೆ
ಸಚಿವ ಎಂ.ಬಿ.ಪಾಟೀಲ ಅವರ ನೀರಾವರಿ ಯೋಜನೆಗಳು ಕೃಷಿ ಮತ್ತು ರೈತರ ಬದುಕಿಗೆ ಭದ್ರತೆ ನೀಡಿವೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ‌ ಹೇಳಿದರು. ಬಬಲೇಶ್ವರ ಪಟ್ಟಣದಲ್ಲಿ‌ ಕೆ.ಆರ್.ಐ.ಡಿ.ಎಲ್ ವತಿಯಿಂದ ₹ 32 ಲಕ್ಷ ವೆಚ್ಚದಲ್ಲಿ ಮತ್ತು ಹೊಕ್ಕುಂಡಿಯಲ್ಲಿ ₹ 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ‌ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಚನ್ನಮ್ಮನ ಪ್ರತಿಮೆ ಲೋಕಾರ್ಪಣೆ ಯಾವಾಗ?
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಾಲ್ಕು ವರ್ಷಗಳಿಂದ ನಿರ್ಮಾಣವಾಗಿ ನಿಂತಿರುವ ವೀರರಾಣಿ ಕಿತ್ತೂರ ಚನ್ನಮ್ಮನ ಪ್ರತಿಮೆಯನ್ನು ಇದುವರೆಗೂ ಅನಾವರಣ ಮಾಡಲು ಸರ್ಕಾರ ಮುಂದಾಗಿಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹಿಳೆಯ ಪ್ರತಿಮೆ ಅನಾವರಣ ಮಾಡುವಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿ ತೋರಿಸುತ್ತಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆರೋಪಿಸಿದರು.
ಪೊಲೀಸ್‌ ಹುದ್ದೆ ಖಾಲಿಯಿಂದಾಗಿ ಸಿಬ್ಬಂದಿ ಮೇಲೆ ಒತ್ತಡ
ಈ ವರ್ಷ ದೇಶಾದ್ಯಂತ 216 ಜನ ಪೊಲೀಸರು ಹಾಗೂ ಪೊಲೀಸ್ ಅಧಿಕಾರಿಗಳು ಸೇವೆ ಸಲ್ಲಿಸುವಾಗ ಬಲಿಯಾಗಿದ್ದು, ಅವರಿಗೆ ಶ್ರದ್ಧಾಂಜಲಿ ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪೊಲೀಸ್ ಇಲಾಖೆಯಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದು, 24/7 ಮಾದರಿಯಲ್ಲಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಹೇಳಿದರು.
ಎಲ್ಲ ಕ್ಷೇತ್ರಗಳಲ್ಲು ವಿಜಯಪುರ ಜಿಲ್ಲೆಯ ಕೊಡುಗೆ ಅದ್ಭುತ
ಸಾರಸ್ವತ, ಸಂಗೀತ ಹೀಗೆ ಎಲ್ಲ ಕ್ಷೇತ್ರಗಳಿಗೂ ವಿಜಯಪುರ ಜಿಲ್ಲೆಯ ಕೊಡುಗೆ ಅದ್ಭುತ ಹಾಗೂ ಅಮೋಘವಾಗಿದೆ ಎಂದು ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.
ಜೂಡೋ ಸ್ಪರ್ಧೆಯಲ್ಲಿ ಆರತಿ ಸೊನ್ನದ ರಾಷ್ಟ್ರಮಟ್ಟಕ್ಕೆ ಆಯ್ಕೆ
ವಿಜಯಪುರ: ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ಇಲಾಖೆ)ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ೨೦೨೪-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ವಿಜಯಪುರದ ಎಸ್.ಎಸ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ೫೨ ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved