ಒತ್ತಡದ ಬದುಕಿಗೆ ಆಯುರ್ವೇದ ಉತ್ತರ: ಕರ್ಪೂರಮಠಕನ್ನಡಪ್ರಭ ವಾರ್ತೆ ವಿಜಯಪುರ: ಆಧುನಿಕ ಯುಗದ ಒತ್ತಡದ ಬದುಕಿಗೆ ಪುರಾತನ ವೈದ್ಯಕೀಯ ಪದ್ಧತಿ ಆಯುರ್ವೇದ ಉತ್ತರವಾಗಿದೆ. ಇತ್ತೀಚೆಗೆ ಯುವಕರಲ್ಲಿ ಹೃದಯ ಸಂಬಂಧಿ ರೋಗಗಳು ಉಲ್ಬಣಿಸುತ್ತಿದ್ದು, ಆಯುರ್ವೇದ, ಯೋಗ ಹಾಗೂ ಪ್ರಾಣಾಯಾಮಗಳನ್ನು ಅಳವಡಿಸಿಕೊಂಡರೆ ಈ ಸಮಸ್ಯೆಗಳಿಂದ ದೂರವಿರಬಹುದೆಂದು ಆರ್.ಕೆ.ಎಮ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.