ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆಪೆಟ್ರೋಲ್, ಡೀಸೆಲ್, ಹಾಲಿನ ದರದ ಜೊತೆಗೆ ಎಲ್ಲ ವಸ್ತುಗಳ ಬೆಲೆಯ ಮೇಲೆ ತೆರಿಗೆ ಹೆಚ್ಚಿಸಿರುವುದನ್ನು ಖಂಡಿಸಿ ತಾಳಿಕೋಟೆಯ ಭಾರತೀಯ ಜನತಾ ಪಕ್ಷದ ನಗರ ಘಟಕದ ವತಿಯಿಂದ ಪಟ್ಟಣದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.ಪ್ರತಿಭಟನಾ ಸಮಯದಲ್ಲಿ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಭಾವಚಿತ್ರ ದಹಿಸಿ, ಕೆಲ ಗಂಟೆಕಾಲ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು.