• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಘ್ನ ನಿವಾರಕನಿಗೆ ಶ್ರದ್ಧಾ ಭಕ್ತಿಯ ಬೀಳ್ಕೊಡುಗೆ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದಲ್ಲಿ ವಿಜೃಂಭಣೆಯಿಂದ ಪ್ರತಿಷ್ಠಾಪಿಸಲ್ಪಟ್ಟಿದ್ದ ಗಣೇಶ ಮೂರ್ತಿಗಳನ್ನು 5ನೇ ದಿನ ಅಷ್ಟೇ ಸಾಂಪ್ರದಾಯಿಕವಾಗಿ ವಿಸರ್ಜನೆ ಮಾಡಲಾಯಿತು. ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳು ಹಾಗೂ ತಾಜಬಾವಡಿ ಸೇರಿ ವಿವಿಧೆಡೆ ಪಾಲಿಕೆಯಿಂದ ನಿರ್ಮಿಸಿದ್ದ ಕೃತಕ ಹೊಂಡಗಳಲ್ಲಿ ಬುಧವಾರ ತಡರಾತ್ರಿವರೆಗೂ ವಿಸರ್ಜಿಸಲಾಯಿತು.
ಆಲಮೇಲದಲ್ಲಿ ಅದ್ಧೂರಿ ಗಣೇಶ ವಿಸರ್ಜನೆ
ಕನ್ನಡಪ್ರಭ ವಾರ್ತೆ ಆಲಮೇಲ ಆಲಮೇಲದಲ್ಲಿ ಐದನೇ ದಿನದ ಗಣೇಶ ವಿಸರ್ಜನೆ ಸಂಭ್ರಮ ಜೋರಾಗಿತ್ತು. ಪಟ್ಟಣ ಸೇರಿದಂತೆ ಜಿಲ್ಲೆಯಾದ್ಯಂತ ಮತ್ತು ಪಕ್ಕದ ಕಲಬುರ್ಗಿ ಮತ್ತು ಮಹಾರಾಷ್ಟ್ರದಿಂದಲೂ ಇಲ್ಲಿಯ 14 ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನೋಡಲು ಸಾವಿರಾರು ಜನರು ಆಗಮಿಸಿದ್ದರು. ಡಿಜೆ ಸೌಂಡ್‌ಗೆ ಯುವಕ, ಯುವತಿಯರು ಕುಣಿದು ಕುಪ್ಪಳಿಸುತ್ತಿದ್ದರು.
ಶಂಕರಲಿಂಗ ಗಜಾನನ ಮಂಡಳಿಯಿಂದ ಆರೋಗ್ಯ ತಪಾಸಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಗಣೇಶ ಚತುರ್ಥಿ ನಿಮಿತ್ತ ಜೋರಾಪುರ ಪೇಠನಲ್ಲಿರುವ ಶಂಕರಲಿಂಗ ಗಜಾನನ ಮಂಡಳಿ ವತಿಯಿಂದ ನಗರದ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಸಲಾಯಿತು. ಆರೋಗ್ಯ ಉಚಿತ ತಪಾಸಣೆಯಲ್ಲಿ ಸಂಧಿವಾತ, ಅರ್ಥೈಟಿಸ್ ಸಮಸ್ಯೆಗಳಿಗೆ ಔಷಧಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.
ಪಾಲಕರು, ಶಿಕ್ಷಕರು ಮಕ್ಕಳ ಪ್ರತಿಭೆ ಪ್ರೋತ್ಸಾಹ ನೀಡಿ
ಕನ್ನಡಪ್ರಭ ವಾರ್ತೆ ಇಂಡಿ: ಮಕ್ಕಳಲ್ಲಿ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಒಂದಾಗಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು. ತಾಲೂಕಿನ ತೆನ್ನಿಹಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯಶಸ್ಸಿಗೆ ಪರಿಶ್ರಮ, ಸೋಲಿಗೆ ಲೋಪಗಳೇ ಕಾರಣ
ಕನ್ನಡಪ್ರಭ ವಾರ್ತೆ ವಿಜಯಪುರ ಮಕ್ಕಳ ಅಭಿವೃದ್ಧಿಗೆ ಪಾಲಕರ ಉತ್ತೇಜನ ಅವಶ್ಯಕ. ವಿದ್ಯಾರ್ಥಿಗಳು ಪಾಲಕರನ್ನು ಸಂತೋಷವಾಗಿಡಲು ಪ್ರಯತ್ನಿಸಲಿ. ಓದು ಬಿಟ್ಟು ಅಡ್ಡದಾರಿ ತುಳಿಯಬೇಡಿ. ಯಶಸ್ಸಿನ ಹಿಂದೆ ಪರಿಶ್ರಮವಿರುತ್ತದೆ. ಸೋಲಿನ ಹಿಂದೆ ಲೋಪಗಳಿರುತ್ತವೆ ಎನ್ನುವ ಸೂಕ್ಷ್ಮತೆ ಅರಿಯಿರಿ ಎಂದು ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದು ನ್ಯಾಯಾಧೀಶರಾಗಿ ನೇಮಕವಾಗಿರುವ ಝಹೀರ್ ಅತನೂರ ಹೇಳಿದರು.
ಗಣೇಶನಿಗೆ ವಿಶೇಷ ಗಂಗಾರತಿ: ರಾಜ್ಯದಲ್ಲೇ ಮೊದಲು
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಗಜಾನನ ಮಹಾ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನಿಗೆ ಗಂಗಾ ಆರತಿ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ವಾರಣಾಸಿಯಿಂದ ಆಗಮಿಸಿದ್ದ ಐವರು ಅರ್ಚಕರ ತಂಡ ಗಣೇಶನಿಗೆ ಒಂದುಗಂಟೆ ಕಾಲ ಗಂಗಾ ಆರತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಗಣೇಶನಿಗೆ ಗಂಗಾ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜ್ಯದಲ್ಲಿಯೇ ಇದೇ ಪ್ರಪ್ರಥಮ ಬಾರಿಗೆ ಎನ್ನಲಾಗುತ್ತಿದೆ.
ಅಂಗನವಾಡಿಗಳಿಗೆ ಸಿಇಒ ಭೇಟಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರದ ಆಕರ್ಷಣೀಯ ಮತ್ತು ಸುಸಜ್ಜಿತ ಕಟ್ಟಡ ಮತ್ತು ಮಕ್ಕಳ ಕಲಿಕೆ, ವಿವಿಧ ಕ್ರಿಯಾ ಚಟುವಟಿಕೆಗಳನ್ನು ವೀಕ್ಷಿಸಿದರು. ಅಲ್ಲಿರುವ ಮಕ್ಕಳೊಂದಿಗೆ ಸಂವಾದ ನಡೆಸಿ, ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಪಡೆದರು. ಅಂಗನವಾಡಿ ಕೇಂದ್ರದ ಮಕ್ಕಳಿಗಾಗಿ ಸಿದ್ಧಪಡಿಸಿದ ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು.
ಮಕ್ಕಳ ವೈಜ್ಞಾನಿಕ ಕೌಶಲಕ್ಕೆ ಸಮನ್ವಯ ಹಬ್ಬ ಸಾಕ್ಷಿ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ.ಎಂ.ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್.ಎಸ್.ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಠಮಿ, ಫುಡ್ ಫೆಸ್ಟಿವಲ್, ಹೊಸ ಬೋಧನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು.
ವಸಂತ ನಾಡಿಗೇರಗೆ ಕಾನಿಪ ಸದಸ್ಯರಿಂದ ನುಡಿನಮನ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿ, ಅನಾರೋಗ್ಯದಿಂದ ನಿಧನರಾದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆ ಆರಂಭಕ್ಕೆ ಮುನ್ನ ನಿಧನರಾದ ಪತ್ರಕರ್ತ ವಸಂತ ನಾಡಿಗೇರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.
ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಬಿಜೆಪಿಗೆ ಅನ್ಯಾಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕರು ಮಧ್ಯಸ್ಥಿಕೆ ವಹಿಸಿದ್ದರಿಂದ ಬಿಜೆಪಿ ಸದಸ್ಯರಿಗೆ ಅನ್ಯಾಯವಾಗಿದೆ. ಇದು ಸಂವಿಧಾನ ವಿರೋಧಿ ಚುನಾವಣೆಯಾಗಿ ಇದನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಹಾಗೂ ಸದಾಶಿವ ಮಾಗಿ ಹೇಳಿದ್ದಾರೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved