ಅಧಿಕಾರಿಗಳಿಗೆ ಮಕ್ಕಳ ನರಕಯಾತನೆ ದರ್ಶನಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ವಿವಿಧೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕಿನ ವಿವಿಧ ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ, ಡಾ.ತಿಪ್ಪೇಸ್ವಾಮಿ.ಕೆ.ಟಿ ಮತ್ತು ಶೇಖರಗೌಡ.ಜಿ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.