• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳ್ಳತನ, ಸುಲಿಗೆ: ಇಬ್ಬರು ಆರೋಪಿಗಳ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಹೊರ್ತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಏಳು ಹಾಗೂ ದೇವರ ಹಿಪ್ಪರಗಿ ಠಾಣೆ ವ್ಯಾಪ್ತಿಯ ಒಂದು ಪ್ರಕರಣ ಸೇರಿ ಒಟ್ಟು ಎಂಟು ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಬೇಧಿಸಿದ್ದು, ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ, ಸೆರೆಸಿಕ್ಕ ಆರೋಪಿಗಳಿಂದ 184 ಗ್ರಾಂ ಚಿನ್ನ ಮತ್ತು 80 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ. ಇನ್ನುಳಿದ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ
ಕನ್ನಡಪ್ರಭ ವಾರ್ತೆ ಕೊಲ್ಹಾರ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ಕೊಲ್ಹಾರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀಗಳು ಹಾಗೂ ಕರವೇ ಅವಳಿ ಜಿಲ್ಲೆ ಉಸ್ತುವಾರಿ ಸುರೇಶ ಹಾರಿವಾಳ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆ ದಿಗಂಬರೇಶ್ವರ ಮಠದಿಂದ ಆರಂಭವಾಗಿ ಬಸವೇಶ್ವರ ವೃತ್ತದವರೆಗೆ ಸಾಗಿತು.
ಹೋರಾಟದ ಮನೋಭಾವ ಬೆಳೆಸಿಕೊಳ್ಳಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನೆಲ,ಜಲ, ಭಾಷೆಗೆ ಧಕ್ಕೆ ಬಂದಾಗ ಹೋರಾಟ ಮಾಡುವ ಮನೋಭಾವವನ್ನು ಪ್ರತಿಯೊಬ್ಬ ಕನ್ನಡಿಗರು ಬೆಳೆಸಿಕೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಹೇಳಿದರು.
ತಾಲೂಕಿನಾದ್ಯಂತ ಸಂಭ್ರಮದ ದಸರಾ ಮಹೋತ್ಸವ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ನಾಡಹಬ್ಬ ದಸರಾ ಉತ್ಸವ ನಿಮಿತ್ತ ತೇರದಾಳ ತಾಲೂಕಿನಾದ್ಯಂತ ಘಟಸ್ಥಾಪನೆ, ದೇವಿ ಆರಾಧನೆ, ಮೌನಾನುಷ್ಠಾನ, ದೇವಿ ಪುರಾಣ, ಅಲಂಕಾರಿಕ ಪೂಜೆಗಳು, ವೃತಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗುತ್ತಿವೆ.
ಪ್ರಿಂಟರ್ಸ್ ಅಸೋಸಿಯೇಷನ್‌ನಿಂದ ಪ್ರತಿಭಾ ಪುರಸ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ: ಬಿಜಾಪುರ ಜಿಲ್ಲಾ ಆಫಸೆಟ್ ಪ್ರಿಂಟರ್ಸ್ ಅಸೋಸಿಯೇಷನ್‌ನಿಂದ ನಗರದ ಶಹಾಪೇಟೆ ಗಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಪ್ರಕಾಶ ಅಕ್ಕಲಕೋಟ ಮಾತನಾಡಿ, 2017ರಲ್ಲಿ ಆರಂಭವಾಗಿರುವ ಸಂಘಟನೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಆಫಸೆಟ್ ಪ್ರಿಂಟಿಂಗ್ ಪ್ರೆಸ್ ವೃತ್ತಿಯಲ್ಲಿ ಸಾಕಷ್ಠು ಬದಲಾವಣೆಗಳು ಆಗಿವೆ.
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನಾನಾ ಯೋಜನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಡಾ.ಬಿ.ಆರ್.ಅಂಬೇಡ್ಕರ ನಿಜವಾದ ಶೋಷಿತ ಹಾಗೂ ಬಡ ಸಮಾಜಗಳ ಮಕ್ಕಳು ಶಿಕ್ಷಣವಂತರಾಗಲಿ ಎಂಬ ಉದ್ದೇಶದಿಂದ ಆಯಾ ಸಮಾಜಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಗ್ರಾಮೀಣ ಮಟ್ಟದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಸತಿ ನಿಲಯ ಸೇರಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಸರ್ಕಾರಿ ನೌಕರಿ ಸಿಗುವುದು ಸಂವಿಧಾನ ಕೊಡುಗೆ: ಸುಹೇಲ್ ಅಹ್ಮದ್
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು. ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯಕ್ಕೆ ಚಾಲನೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನ.೧೩ ರಂದು ಜರುಗುವ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯವನ್ನು ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.
ಆಲಮೇಲಗೆ ತೋಟಗಾರಿಕೆ ಕಾಲೇಜು
ಕನ್ನಡಪ್ರಭ ವಾರ್ತೆ ಆಲಮೇಲ ಆಲಮೇಲ ಪಟ್ಟಣಕ್ಕೆ ಮಂಜೂರಾಗಿರುವ ತೋಟಗಾರಿಕೆ ಕಾಲೇಜು ಆರಂಭಕ್ಕೆ ₹ 145 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲ ಹಂತದಲ್ಲಿ ₹ 40 ಕೋಟಿ ಮಂಜೂರಾಗಿ ₹ 10 ಕೋಟಿ ಬಿಡುಗಡೆ ಆಗಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಉಪ ಕುಲಪತಿ ವಿಷ್ಣುವರ್ಧನ ಹೇಳಿದರು.
ಕತ್ತೆ ಬಂಡವಾಳ ತೋರಿಸಿ ಕೋಟಿಗಟ್ಟಲೇ ಪಂಗನಾಮ!
ಕನ್ನಡಪ್ರಭ ವಾರ್ತೆ ವಿಜಯಪುರ ಕೇವಲ ಮೂರು ಲಕ್ಷ ಬಂಡವಾಳ ಹಾಕಿದರೆ ಸಾಕು ತಿಂಗಳಿಗೆ ಲಕ್ಷ ಲಾಭ ಸಿಗಲಿದೆ ಎಂದು ನಂಬಿಸಿ ಕಂಪನಿಯೊಂದು ವಿಜಯಪುರ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ರಾಯಚೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೂರಾರು ಜನರಿಗೆ ವಂಚನೆ ಮಾಡಿದೆ. ಕತ್ತೆ ಹಾಲಿನ ವ್ಯಾಪಾರ ಮಾಡಿ ಎಂದು ನಂಬಿಸಿದ ತಂಡ ಅಮಾಯಕರಿಂದ ₹13.50 ಕೋಟಿ ಹಣ ಕಟ್ಟಿಸಿಕೊಂಡು ಪರಾರಿಯಾಗಿದೆ. ಈ ಡಾಂಕಿ ಮಿಲ್ಕ್ ನಂಬಿದವರೆಲ್ಲ ಮೋಸಕ್ಕೆ ಒಳಗಾಗಿದ್ದಾರೆ. ಇನ್ನು, ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಲು ಪೊಲೀಸರು ಕೂಡ ಚಿಂತನೆ ನಡೆಸಿದ್ದಾರೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 422
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved