ಶೆಡ್ ಗಿರಾಕಿ ಎಂದ ಎಂಬಿಪಾ ಕ್ಷಮೆ ಕೇಳಲಿವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಶೆಡ್ ಗಿರಾಕಿ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಲಿತರಿಗೆ ಅಪಮಾನ ಮಾಡಿದ್ದಾರೆ. ತಕ್ಷಣವೇ ಸಚಿವ ಎಂ.ಬಿ.ಪಾಟೀಲ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಜತೆಗೆ ದಲಿತ ಸಮುದಾಯದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥ ಮೀಸಿ ಆಗ್ರಹಿಸಿದರು.